Sunday, September 2, 2012

ಬಾ ಸವಿತಾ / baa savitha




ಬಾ ಸವಿತಾ ಬಾ ಸವಿತಾ ಬಾ ಸವಿತಾ..

ಒಳಗಿನ ಕಣ್ಣನು ಮುಚ್ಚಿಸಿವೊಮ್ಮೆ
ತಿಳಿವಿಗೆ ಬಣ್ಣವ ಹಚ್ಚಿಸಿವೊಮ್ಮೆ
ಒಳಿತಲ್ಲದುದೆ ಒಳಿತೆಂಬುದರ
ಚಳಕವೆಲ್ಲಕೆ ವಿನಾಶವತಾ || ಬಾ ||

ನೆಲೆಯಿಂದ ಹೊರಟು ಅಲೆ ಅಲೆ ಅಲೆ ಅಲೆ
ಛಲ ತೊಟ್ಟ ಮಲ್ಲ, ವಾಹಿನಿ ಬಾ
ನಿಲವಿಲ್ಲಾ ಜಗದಿ ಕತ್ತಲೆಗೆಂದು
ಗೆಲವನು ಸಾರುವ ಭಾಸವ ತಾ || ಬಾ ||

ಓಂ ತತ್ಸವಿತುರ್ವರೇಣ್ಯವೆಂಬೆವು
ಅಂತಲ್ಲದೆ ಬೇರೆಯದನು ನಂಬೆವು
ಪಂಥವ ಬೆಳೆಗಿಸಿ ನಿರೂಪಿಸಿ ಕೋಂಬೆವು
ಶಾಂತಸುಂದರ ಶಿವದಾ ಸವಿತಾ || ಬಾ ||

ಸಾಹಿತ್ಯ - ಮಾಸ್ತಿ ವೆಂಕಟೇಶ ಅಯ್ಯಂಗಾರ್
ಸಂಗೀತ - ಮೈಸೂರು ಅನಂತಸ್ವಾಮಿ
ಗಾಯನ - ?

download baa savitha